ಉಡುಪಿ: ಬಾರೀ ಮಳೆ ಹಿನ್ನೆಲೆ ನಾಳೆ ಉಡುಪಿ ಜಿಲ್ಲೆಯ ಪ್ರಾಥಮಿಕ- ಪ್ರೌಢ ಶಾಲೆಗಳಿಗೆ ಆ.04 (ನಾಳೆ) ರಂದು ರಜೆ ಘೋಷಣೆ

ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಯೆಲ್ಲೊ ಆಲರ್ಟ್ ಮುನ್ಸೂಚನೆಯಂತೆ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 04.08.2026 ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಹಾಗೂ ಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿರುತ್ತದೆ.
