ಬಜ್ಪೆ: ಮನೆ ಅಂಗಳಕ್ಕೆ ನುಗ್ಗಿ ನಾಯಿಯನ್ನು ಹೊತ್ತೊಯ್ದ ಚಿರತೆ!

ಮಂಗಳೂರು: ಚಿರತೆಯೊಂದು ಮನೆಯ ಅಂಗಳಕ್ಕೆ ನುಗ್ಗಿ ಮಲಗಿದ್ದ ಶ್ವಾನವನ್ನು ಹೊತ್ತೊಯ್ದ ಘಟನೆ ನಗರದ ಹೊರವಲಯದ ಬಜ್ಪೆ ಸಮೀಪದ ಪೆರ್ಮುದೆಯಲ್ಲಿ ನಡೆದಿದೆ.
ಏಕಾಏಕಿ ಅಂಗಳಕ್ಕೆ ನುಗ್ಗಿದ ಚಿರತೆ ಮನೆಯ ಸಮೀಪ ಮಲಗಿದ್ದ ಶ್ವಾನದ ಮೇಲೆ ದಾಳಿ ನಡೆಸಿ ಬಳಿಕ ಅದನ್ನು ಬಾಯಿಯಲ್ಲಿ ಕಚ್ಚಿಕೊಂಡು ತೆರಳುತ್ತಿರುವ ದೃಶ್ಯ ಮನೆಯ ಆವರಣದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಈ ಭಾಗದಲ್ಲಿ ಚಿರತೆ ಸಂಚಾರ ಇದೆ ಎಂಬ ಸುದ್ದಿಗಳ ನಡುವೆಯೇ ರಾತ್ರಿ ವೇಳೆ ನಡೆದ ಈ ಘಟನೆ ಸ್ಥಳೀಯರಲ್ಲಿ ಇನ್ನಷ್ಟು ಆತಂಕ ಮೂಡಿಸಿದೆ. ಇದೇ ವೇಳೆ ಈ ಪರಿಸರದಲ್ಲಿ ಮತ್ತಷ್ಟು ಚಿರತೆಗಳ ಸಂಚಾರವಿದೆ ಎಂಬ ಅನುಮಾನವೂ ಕಾಡುತ್ತಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣವೇ ಸೂಕ್ತ ಕ್ರಮ ಕೈಗೊಂಡು, ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಸ್ಥಳೀಯರು ಅಗ್ರಹಿಸಿದ್ದಾರೆ ಒತ್ತಾಯಿಸಿದ್ದಾರೆ.
ಈ ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಅರಣ್ಯ ಇಲಾಖೆ ಅಲರ್ಟ್ ಆಗಿದ್ದು, ಚಿರತೆಯ ಚಲನಲನಗಳ ಮೇಲೆ ನಿಗಾ ಹೆಚ್ಚಿಸಿದೆ.
