ಸಿಎಂ ಡಿಕೆಶಿ ಅವರ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಇಲಾಖೆಯ ಜವಾಬ್ದಾರಿ?

ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ ಆಗಸ್ಟ್ 3ರಂದು ಸೇರ್ಪಡೆಯಾಗಿದ್ದ ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆಯಾಗಿದೆ. ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಪಕ್ಷದಲ್ಲಿ ಭಾರಿ ಅಸಮಾಧಾನ ಭುಗೆಲದ್ದಿದ್ದ ಹಿನ್ನೆಲೆ ಕಾಂಗ್ರೆಸ್ ಹೈಕಮಾಂಡ್, ಅಳೆದು ತೂಗಿ ನೂತನ ಸಚಿವರಿಗೆ ಜವಾಬ್ದಾರಿ ನೀಡಿದೆ.
ಯಾರಿಗೆ ಯಾವ ಖಾತೆ? ಇಲ್ಲಿದೆ ವಿವರ:
ಎನ್.ಚಲುವರಾಯಸ್ವಾಮಿ – ಕೃಷಿ ಇಲಾಖೆ
ರಿಜ್ವಾನ್ ಅರ್ಷದ್ – ಆಹಾರ & ನಾಗರಿಕ ಸರಬರಾಜು ವ್ಯವಹಾರ
ಕೆ.ಹೆಚ್.ಮುನಿಯಪ್ಪ – ಸಮಾಜ ಕಲ್ಯಾಣ ಇಲಾಖೆ
ಸಂತೋಷ್ ಲಾಡ್ – ಕಾರ್ಮಿಕ ಇಲಾಖೆ
ಕೆ.ಎಸ್.ಬಸವಂತಪ್ಪ- ಮೀನುಗಾರಿಕೆ, ಬಂದರು ಮತ್ತು ಒಳನಾಡು
ಮಧು ಬಂಗಾರಪ್ಪ – ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ
ಬಸವರಾಜ ರಾಯರೆಡ್ಡಿ – ಉನ್ನತ ಶಿಕ್ಷಣ ಇಲಾಖೆ
ಜಮೀರ್ ಅಹ್ಮದ್ ಖಾನ್ – ವಸತಿ ಇಲಾಖೆ
ಲಕ್ಷ್ಮಣ ಸವದಿ – ಸಹಕಾರ ಇಲಾಖೆ
ಡಾ.ಅಜಯ್ ಸಿಂಗ್ – ಅರಣ್ಯ ಇಲಾಖೆ
ಎಸ್.ಎಸ್.ಮಲ್ಲಿಕಾರ್ಜುನ – ಗಣಿ ಮತ್ತು ಭೂವಿಜ್ಞಾನ ಇಲಾಖೆ
ಹೆಚ್.ಸಿ.ಬಾಲಕೃಷ್ಣ – ಸಣ್ಣ ನೀರಾವರಿ ಇಲಾಖೆ
ಪುಟ್ಟರಂಗ ಶೆಟ್ಟಿ – ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
ಸಚಿವ ಮುನಿಯಪ್ಪ ಖಾತೆ ಬದಲಾವಣೆ
ಸಚಿವ ಕೆ.ಹೆಚ್.ಮುನಿಯಪ್ಪ ಖಾತೆ ಬದಲಾವಣೆ ಮಾಡಲಾಗಿದ್ದು, ಸಮಾಜಕಲ್ಯಾಣ ಇಲಾಖೆಯ ಹೊಣೆ ನೀಡಲಾಗಿದ್ದೆ. ಈ ಹಿಂದೆ ಮುನಿಯಪ್ಪಗೆ ಆಹಾರ ಇಲಾಖೆ ನೀಡಲಾಗಿತ್ತು. ಈಗ ಆ ಖಾತೆಯನ್ನು ರಿಜ್ವಾನ್ ಅರ್ಷದ್ಗೆ ಹಂಚಿಕೆ ಮಾಡಲಾಗಿದೆ.
