ಗಂಗಾವಳಿಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಗಂಗಾವಳಿಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಗಂಗವಾಳಿ: ಎಂ.ಜೆ.ಎಂ. ಗಂಗಾವಳಿ ಹಾಗೂ ಹಯಾತುಲ್ ಇಸ್ಲಾಂ ಮದ್ರಸಾ, ಗಂಗಾವಳಿ ಇವರ ವತಿಯಿಂದ ದೇಶದ 80ನೇ ಸ್ವಾತಂತ್ರ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.

ಮಸೀದಿಯ ಅಧ್ಯಕ್ಷರು ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದ ಅವರು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸುತ್ತಾ, ದೇಶದ ಏಕತೆ, ಶಾಂತಿ, ಸೌಹಾರ್ದತೆ ಹಾಗೂ ಸಹೋದರತ್ವವನ್ನು ಮತ್ತಷ್ಟು ಬಲಪಡಿಸುವ ಸಂಕಲ್ಪದೊಂದಿಗೆ ಸ್ವಾತಂತ್ರ್ಯೋತ್ಸವವನ್ನು ಗೌರವಪೂರ್ವಕವಾಗಿ ಆಚರಿಸಬೇಕೆಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಮಸೀದಿಯ ಖತೀಬರಾದ ರಿಜ್ವಾನ್ ಸಕಾಫಿ, ಸದರ್ ನೌಶಾದ್ ಮದನಿ, ಸಾಕೀರ್ ಮೌಲಾನಾ, ಕಬೀರ್ ಮೌಲಾನಾ, ಮೊಹಮ್ಮದ್ ಮೌಲಾನಾ, ಉಪಾಧ್ಯಕ್ಷರಾದ ಸೂಪಿ, ಕಾರ್ಯದರ್ಶಿಗಳಾದ ಬಶೀರ್ ಪಣ್ಣಾನಿ, ಹುಸೇನ್ ಬಿಜಾಪುರ, ಹಿರಿಯ ಶಿಕ್ಷಕರಾದ ಅಬ್ದುಲ್ ಮಾಸ್ಟರ್, ಉಪಾಧ್ಯಕ್ಷರಾದ ಮಹ್ಮೂದ್ ಕೆಳಗಿನಕೇರಿ ಸೇರಿದಂತೆ ಜಮಾತಿನ ಎಲ್ಲಾ ಸದಸ್ಯರು ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಮಕ್ಕಳು, ಯುವಕರು ಹಾಗೂ ಹಿರಿಯರು ಉತ್ಸಾಹದಿಂದ ಪಾಲ್ಗೊಂಡು ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು. ದೇಶದ ಪ್ರಗತಿಗಾಗಿ ಪ್ರತಿಯೊಬ್ಬರೂ ತಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು ಹಾಗೂ ಪರಸ್ಪರ ಪ್ರೀತಿ, ಗೌರವ ಮತ್ತು ಸೌಹಾರ್ದತೆಯಿಂದ ಬದುಕಬೇಕು ಎಂಬ ಸಂದೇಶವನ್ನು ನೀಡಲಾಯಿತು.

Leave a Reply

Your email address will not be published. Required fields are marked *