ದ.ಕ. ಜಿಲ್ಲೆಯಲ್ಲಿ ಭಾರೀ ಮಳೆ ಶನಿವಾರ ಶಾಲಾ-ಕಾಲೇಜುಗಳಿಗೆ ರಜೆ

ಮಂಗಳೂರು: ದ.ಕ. ಜಿಲ್ಲೆಯಾದ್ಯಂತ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಶನಿವಾರ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜು, ಐಟಿಐ, ಡಿಪ್ಲೊಮಾ ಮತ್ತು ವಸತಿ ಕಾಲೇಜುಗಳಿಗೆ ಆ. 1ರಂದು ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
