ಆನೆಗುಡ್ಡೆ: ಕಾರು ಡಿಕ್ಕಿ – ಸ್ಕೂಟರ್ ಸವಾರ ಮೃತ್ಯು!

ಆನೆಗುಡ್ಡೆ: ಕಾರು ಡಿಕ್ಕಿ – ಸ್ಕೂಟರ್ ಸವಾರ ಮೃತ್ಯು!

ಕುಂದಾಪುರ: ಸ್ಕೂಟರ್ ಗೆ ಹಿಂಬದಿಯಿಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಸೋಮವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 66ರ ಕುಂಭಾಶಿ ಗ್ರಾಮದ ಆನೆಗುಡ್ಡೆ ಸ್ವಾಗತ ಗೋಪುರದ ಬಳಿ ಸಂಭವಿಸಿದೆ.

ಮೃತಪಟ್ಟ ಸ್ಕೂಟರ್ ನನ್ನು ಬ್ರಹ್ಮಾವರ ತಾಲೂಕಿನ ವಡ್ಡರ್ಸೆ ಗ್ರಾಮದ ಗಣೇಶ್(34) ಎಂದು ಗುರುತಿಸಲಾಗಿದೆ.
ಪೊಲೀಸರ ಮಾಹಿತಿಯಂತೆ ಸ್ಕೂಟರ್ ಸವಾರ ಕುಂದಾಪುರದಿಂದ ವಡ್ಡರ್ಸೆಗೆ ಬರುತ್ತಿದ್ದ ವೇಳೆ ಅದೇ ದಿಕ್ಕಿನಿಂದ ಆರೋಪಿ ಅರವಿಂದ್ ಎಂಬವರು ಕುಂದಾಪುರದಿಂದ ಉಡುಪಿ ಕಡೆಗೆ ಅತಿವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದ ಕಾರು ಹಿಂಬದಿಯಿಂದ ನೇರ ಡಿಕ್ಕಿ ಹೊಡೆದಿದ್ದಾರೆ.
ಡಿಕ್ಕಿಯ ರಭಸಕ್ಕೆ ಗಣೇಶ್ ಸ್ಕೂಟರ್ ಸಮೇತ ರಸ್ತೆಗೆ ಬಿದ್ದು ತಲೆ, ಮುಖ, ಹೊಟ್ಟೆ ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ಗಂಭೀರ ಗಾಯಗಳಾಗಿದ್ದು, ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು.
ತಕ್ಷಣ ಅವರನ್ನು ಜೀವನ್ ಮಿತ್ರ ನಾಗರಾಜ್ ಪುತ್ರನ್ ಹಾಗೂ ಆಂಬುಲೆನ್ಸ್ ಚಾಲಕ ಕಿಶೋರ್ ಶೆಟ್ಟಿ ಸೇರಿ ಸ್ಥಳೀಯರ ಸಹಕಾರದೊಂದಿಗೆ ಕೋಟೇಶ್ವರದ ಎನ್.ಆರ್. ಆಚಾರ್ಯ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಸಾಗಿಸಿರುತ್ತಾರೆ. ಆದರೆ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮಂಗಳವಾರ (ಆಗಸ್ಟ್ 4) ಮುಂಜಾನೆ ಸುಮಾರು 2 ಗಂಟೆಗೆ ಗಣೇಶ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 63/2026ರಡಿ ಭಾರತೀಯ ನ್ಯಾಯ ಸಂಹಿತೆ (BNS)ಯ ಕಲಂ 281 ಹಾಗೂ 106(1) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *