ಬಂಟ್ವಾಳ: ತೋಡಿಗೆ ಬಿದ್ದು ನಾಪತ್ತೆಯಾಗಿದ್ದ ಜೀವನ್ ಪಿಂಟೋ ಮೃತದೇಹ ಎರಡು ದಿನಗಳ ಬಳಿಕ ಪತ್ತೆ

ಬಂಟ್ವಾಳ : ರಾಯಿ ಗ್ರಾಮದ ಹೋರಂಗಳದಲ್ಲಿ ಶನಿವಾರ ರಾತ್ರಿ ಆಕಸ್ಮಿಕವಾಗಿ ಕಾಲು ಜಾರಿ ತೋಡಿಗೆ ಬಿದ್ದು ನಾಪತ್ತೆಯಾಗಿದ್ದ ಜೀವನ್ ಪಿಂಟೋ ಅವರ ಮೃತದೇಹ ಸೋಮವಾರ ಬೆಳಿಗ್ಗೆ ಪತ್ತೆಯಾಗಿದೆ.
ಶನಿವಾರ ರಾತ್ರಿ ಸಂಭವಿಸಿದ ಘಟನೆಯ ಬಳಿಕ ಸ್ಥಳೀಯರು, ಅಗ್ನಿಶಾಮಕ ದಳ ಹಾಗೂ ಎನ್ಡಿಆರ್ಎಫ್ (NDRF) ತಂಡಗಳು ನಿರಂತರವಾಗಿ ಶೋಧ ಕಾರ್ಯಾಚರಣೆ ನಡೆಸಿದ್ದವು. ಮಳೆ ಹಾಗೂ ನೀರಿನ ಹರಿವು ಹೆಚ್ಚಿದ್ದ ಕಾರಣ ಕಾರ್ಯಾಚರಣೆಗೆ ಅಡಚಣೆ ಉಂಟಾಗಿದ್ದರೂ ಶೋಧ ಮುಂದುವರಿಸಲಾಗಿತ್ತು.
ಸೋಮವಾರ ಬೆಳಿಗ್ಗೆ ಅರಳ ಗ್ರಾಮದ ಪಂಬದಗದ್ದೆ ಸಮೀಪದ ನೀರಿನಲ್ಲಿ ಜೀವನ್ ಪಿಂಟೋ ಅವರ ಮೃತದೇಹ ಪತ್ತೆಯಾಗಿದೆ ಎಂದು ಎನ್ಡಿಆರ್ಎಫ್ ತಂಡ ಮಾಹಿತಿ ನೀಡಿದೆ.
