ಡೇವಿಡ್ ಡಿಸೋಜ ಹತ್ಯೆ ಆರೋಪಿ ಬಂಧನ: ಪೊಲೀಸರ ಮೇಲೆಯೇ ಹಲ್ಲೆ, ಆರೋಪಿ ಕಾಲಿಗೆ ಗುಂಡು

ಡೇವಿಡ್ ಡಿಸೋಜ ಹತ್ಯೆ ಆರೋಪಿ ಬಂಧನ: ಪೊಲೀಸರ ಮೇಲೆಯೇ ಹಲ್ಲೆ, ಆರೋಪಿ ಕಾಲಿಗೆ ಗುಂಡು


ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮುದರಂಗಡಿ ಪೇಟೆಯಲ್ಲಿ ಹಾಡಹಗಲೇ ಡೇವಿಡ್ ಡಿಸೋಜ ನನ್ನು ಕೊಲೆಗೈದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಆರೋಪಿಯನ್ನು ಕಾಪು ಪಿಎಸ್‌ಐ ತೇಜಸ್ವಿ, ಕಾರ್ಕಳ ಗ್ರಾಮಾಂತರ ಪಿಎಸ್‌ಐ ಪ್ರಸನ್ನ ತಂಡವು ಬಂಧಿಸಿ ಕರೆತರುತ್ತಿರುವಾಗ ಬೈಂದೂರು ಸಮೀಪ ಒತ್ತಿನೆಣೆ ಬಳಿ ಆರೋಪಿ ರಾಜು  ಪೋಲಿಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದು, ಈ ವೇಳೆ ಕಾಪು ಪಿಎಸ್‌ಐ ತೇಜಸ್ವಿಯವರು ತಮ್ಮ ಸರ್ವೀಸ್ ಪಿಸ್ತೂಲಿನಿಂದ ರಾಜು ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ.

ಈ ವೇಳೆ ಎಸ್ ಐ ತೇಜಸ್ವಿ ಅವರಿಗೆ ಗಾಯವಾಗಿದ್ದು ಉಡುಪಿ ಖಾಸಗಿ ಆಸ್ಪತ್ರೆಯ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಪಿಎಸ್‌ಐ ತೇಜಸ್ವಿ ಅವರ ಆರೋಗ್ಯ ವಿಚಾರಿಸಿದ್ದಾರೆ.

ಮುದರಂಗಡಿಯಲ್ಲಿ ನಡೆದ ಡೇವಿಡ್ ಡಿಸೋಜ ಹತ್ಯೆ ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದು, ಆರೋಪಿಯ ಬಂಧನದೊಂದಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಮಾಹಿತಿಗಳು ಹೊರಬರುವ ನಿರೀಕ್ಷೆಯಿದೆ.

 

Leave a Reply

Your email address will not be published. Required fields are marked *