ಜಿಲ್ಲಾ ಕಾಂಗ್ರೆಸ್‌ (ಡಿಸಿಸಿ) ಅಧ್ಯಕ್ಷ ಸ್ಥಾನಕ್ಕೆ ಹನೀಫ್ ಬಗ್ಗುಮೂಲೆ ಅರ್ಜಿ ಸಲ್ಲಿಕೆ

ಜಿಲ್ಲಾ ಕಾಂಗ್ರೆಸ್‌ (ಡಿಸಿಸಿ) ಅಧ್ಯಕ್ಷ ಸ್ಥಾನಕ್ಕೆ ಹನೀಫ್ ಬಗ್ಗುಮೂಲೆ ಅರ್ಜಿ ಸಲ್ಲಿಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ (ಡಿಸಿಸಿ) ಸಮಿತಿಯ ಸಾರಥ್ಯ ವಹಿಸಲು ಪಕ್ಷದ ಹಿರಿಯ, ನಿಷ್ಠಾವಂತ ಹಾಗೂ ನೇರ ನಡೆ-ನುಡಿಯ ಪ್ರಭಾವಿ ನಾಯಕ ಹನೀಫ್ ಬಗ್ಗುಮೂಲೆ ಅವರು ಅಧಿಕೃತವಾಗಿ ಅರ್ಜಿ ಸಲ್ಲಿಸಿದ್ದಾರೆ.

ಕಳೆದ ಮೂರು ದಶಕಗಳಿಂದ ಪಕ್ಷ ಹಾಗೂ ಸಮಾಜಸೇವೆಯಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿರುವ ಇವರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ಪ್ರಬಲ ಆಕಾಂಕ್ಷಿಯಾಗಿದ್ದಾರೆ.

ಮೂರು ದಶಕಗಳ ಸುದೀರ್ಘ ರಾಜಕೀಯ ಪಯಣ

ಬಂಟ್ವಾಳ ತಾಲೂಕು ಕುಳ ಗ್ರಾಮದ ಬಗ್ಗುಮೂಲೆ ನಿವಾಸಿಯಾಗಿರುವ ಹನೀಫ್ ಅವರು ಕಳೆದ 30 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳಿಗೆ ಬದ್ಧರಾಗಿ ನಿರಂತರವಾಗಿ ಶ್ರಮಿಸಿದವರು. ಬಾಲ್ಯದಿಂದಲೇ ಸಾಮಾಜಿಕ ಕಳಕಳಿ ಬೆಳೆಸಿಕೊಂಡಿದ್ದ ಇವರು, ಪಕ್ಷದ ಧ್ವಜದಡಿಯಲ್ಲಿ ಉಚಿತ ಮೆಡಿಕಲ್ ಕ್ಯಾಂಪ್‌ಗಳು, ರಕ್ತದಾನ ಶಿಬಿರಗಳು, ಕ್ರೀಡಾ ಕೂಟಗಳು ಹಾಗೂ ಧಾರ್ಮಿಕ ಸಮಾರಂಭಗಳನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ಜನಮಾನಸದಲ್ಲಿ ಆಪತ್ಬಾಂಧವನಾಗಿ ನೆಲೆಸಿದ್ದಾರೆ.

ಇವರ ನಿಸ್ಪಕ್ಷಪಾತ ಸೇವೆ ಮತ್ತು ಸಂಘಟನಾ ಚತುರತೆಯನ್ನು ಗುರುತಿಸಿದ ಕಾಂಗ್ರೆಸ್ ಪಕ್ಷ, ಇವರಿಗೆ ವಿವಿಧ ಹಂತಗಳಲ್ಲಿ ಜವಾಬ್ದಾರಿಗಳನ್ನು ನೀಡಿ ಗೌರವಿಸಿದೆ.
3 ವರ್ಷಗಳ ಕಾಲ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಸೇವಾದಳ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಇವರು ಜಿಲ್ಲಾ ಕಾಂಗ್ರೆಸ್ ಸೇವಾದಳ ಸಂಘಟನಾ ಕಾರ್ಯದರ್ಶಿಯಾಗಿ ಪಕ್ಷದ ತಳಮಟ್ಟದ ಸಂಘಟನೆ. ಕೆಪಿಸಿಸಿ ಕಾರ್ಮಿಕ ವಿಭಾಗದ ಕಾರ್ಯದರ್ಶಿಯಾಗಿ ಶ್ರಮಿಕರ ಪರ ಧ್ವನಿ, ರಾಷ್ಟ್ರೀಯ ರಾಜೀವ ಗಾಂಧಿ ಜ್ಯೋತಿಯಾತ್ರೆ ಸಮಿತಿಯಲ್ಲಿ ಪ್ರಸ್ತುತ ಪ್ರಧಾನ ಕಾರ್ಯದರ್ಶಿಯಾಗಿ ದೇಶಾದ್ಯಂತ ವ್ಯಾಪಕ ಕಾರ್ಯಾಚರಣೆ ಹಾಗೂ ಪಕ್ಷದ ಸಿದ್ಧಾಂತಗಳ ಪ್ರಚಾರವನ್ನು ಮಾಡಿದ್ದಾರೆ.

ಸಾಮಾಜಿಕ, ಧಾರ್ಮಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಅಪಾರ ಜನಸೇವೆ ಸಲ್ಲಿಸಿರುವ ಹನೀಫ್ ಬಗ್ಗುಮೂಲೆ ಅವರ ನಿರಂತರ ಸಮಾಜಮುಖಿ ಕಾರ್ಯಗಳನ್ನು ಗುರುತಿಸಿ “ಗಡಿನಾಡ ರಾಜ್ಯ ಪ್ರಶಸ್ತಿ” ನೀಡಿ ಗೌರವಿಸಲಾಗಿದೆ.
ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಮತ್ತಷ್ಟು ಬಲಪಡಿಸಲು ಮತ್ತು ಎಲ್ಲರನ್ನೂ ಒಟ್ಟಿಗೆ ಕೊಂಡೊಯ್ಯಲು ತಮ್ಮ ಅನುಭವ ಮತ್ತು ಬದ್ಧತೆ ಸಹಕಾರಿಯಾಗಲಿದೆ ಎಂಬ ವಿಶ್ವಾಸದೊಂದಿಗೆ ಅವರು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಯಾಗಿದ್ದಾರೆ.

Leave a Reply

Your email address will not be published. Required fields are marked *