ಶಾಸಕರು ರಾಜೀನಾಮೆ ಕೊಟ್ಟರೆ ಎರಡೇ ನಿಮಿಷದಲ್ಲಿ ಅಂಗೀಕಾರ: ಡಿ.ಕೆ ಶಿವಕುಮಾರ್‌

ಶಾಸಕರು ರಾಜೀನಾಮೆ ಕೊಟ್ಟರೆ ಎರಡೇ ನಿಮಿಷದಲ್ಲಿ ಅಂಗೀಕಾರ: ಡಿ.ಕೆ ಶಿವಕುಮಾರ್‌


ಬೆಂಗಳೂರು: ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಈಕಾರ ಮಾಡಲು ಹೇಳಿದ್ದೇನೆ ಎಂದು ಸಿಎಂ ಡಿ.ಕೆ ಶಿವಕುಮಾರ್‌ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ಪಕ್ಷ ಮುಖ್ಯ, ಪಕ್ಷದಲ್ಲಿ ಶಿಸ್ತು ಮುಖ್ಯ ಎಂದರು. ವೀರೇಂದ್ರ ಪಾಟೀಲ್ ಕಾಲದಲ್ಲಿ ಬಂಗಾರಪ್ಪ, ಮಲ್ಲಿಕಾರ್ಜುನ ಖರ್ಗೆ, ಧರ್ಮಸಿಂಗ್ ಅವರಿಗೆ ಕೊಟ್ಟಿರಲಿಲ್ಲ. ನಾನು, ಪರಮೇಶ್ವರ್ ಕೂಡ ಸಚಿವ ಸ್ಥಾನ ಕೊಡದಿದ್ದಾಗ ಸುಮ್ಮನೆ ಇರಲಿಲ್ಲವಾ ಎಂದು ಪ್ರಶ್ನಸಿದ್ದಾರೆ.
ತಾಳ್ಮೆಯಿಂದ ಇರಬೇಕು, ನಾನು ತಾಳ್ಮೆಯಿಂದ ಇರಲಿಲ್ಲವಾ? ಎಲ್ಲರೂ ತಾಳ್ಮೆಯಿಂದ ಇರಬೇಕು. ಶಾಸಕರು ರಾಜೀನಾಮೆ ಕೊಟ್ಟರೆ ಎರಡೇ ನಿಮಿಷದಲ್ಲಿ ಅಂಗೀಕಾರ ಮಾಡಲು ಹೇಳಿದ್ದೇನೆ ಎಂದು ಖಡಕ್‌ ಎಚ್ಚರಿಕೆ ರವಾನಿಸಿದ್ದಾರೆ. ಇದೇ ವೇಳೆ ತಕ್ಷಣದಿಂದಲೇ ನಿಗಮ ಮಂಡಳಿಗಳ ನೇಮಕಾತಿ ರದ್ದು ಮಾಡಿ ಅವರು ಆದೇಶ ಹೊರಡಿಸಿದ್ದಾರೆ.

ಸಚಿವ ಸ್ಥಾನ ತಪ್ಪಿದ ಬೆನ್ನಲ್ಲೇ ಹಲವು ಶಾಸಕರು ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು. ಈ ಬಗ್ಗೆ ಬೆಂಬಲಿಗರ ಜೊತೆ ಚರ್ಚಿಸಿ ತೀರ್ಮಾನ ಮಾಡುವುದಾಗಿ ತಿಳಿಸಿದ್ದರು. ಇದೀಗ ಅಸಮಾಧಾನಿತ ಶಾಸಕರು ರಾಜೀನಾಮೆ ಕೊಟ್ಟರೆ ಅಂಗಿಕರಿಸುವಂತೆ ಸೂಚಿಸಿದ್ದು, ಭಾರೀ ಕುತೂಹಲಕ್ಕೆ ಕಾರಣವಾಗಿದೆ.

Leave a Reply

Your email address will not be published. Required fields are marked *