ಕೋಟ: ಆರಕ್ಷಕರಿಗೆ ರಕ್ಷೆ ಕಟ್ಟಿ ಗೌರವ ಸಲ್ಲಿಸಿದ ಮಹಿಳಾ ಮೋರ್ಚಾ

ಕೋಟ: ಆರಕ್ಷಕರಿಗೆ ರಕ್ಷೆ ಕಟ್ಟಿ ಗೌರವ ಸಲ್ಲಿಸಿದ ಮಹಿಳಾ ಮೋರ್ಚಾ


ಕೋಟ: ಕುಂದಾಪುರ ಮಂಡಲ ಮಹಿಳಾ ಮೋರ್ಚಾ ವತಿಯಿಂದ ರಕ್ಷಾ ಬಂಧನದ ಅಂಗವಾಗಿ ಕೋಟ ಪೊಲೀಸ್ ಠಾಣೆಯಲ್ಲಿ ವಿಶೇಷವಾಗಿ ರಕ್ಷಾ ಬಂಧನ ಆಚರಿಸಲಾಯಿತು.

ಮಹಿಳಾ ಮೋರ್ಚಾದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಠಾಣೆಗೆ ಭೇಟಿ ನೀಡಿ ಕರ್ತವ್ಯ ನಿರ್ವಹಿಸುತ್ತಿರುವ ಆರಕ್ಷಕರಿಗೆ ರಕ್ಷೆ ಕಟ್ಟಿ ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕೋಟ ಪೊಲೀಸ್ ಠಾಣಾಧಿಕಾರಿ ಪ್ರವೀಣ್ ಕುಮಾರ್, ಆರಕ್ಷಕರ ಮೇಲಿನ ಗೌರವ ಮತ್ತು ಕಾಳಜಿಯಿಂದ ಮಹಿಳಾ ಮೋರ್ಚಾ ಹಮ್ಮಿಕೊಂಡಿರುವ ರಕ್ಷಾ ಬಂಧನ ಆಚರಣೆಯನ್ನು ಅಭಿನಂದಿಸಿದರು. ಇಂತಹ ಆಚರಣೆಗಳು ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ರಕ್ಷಾ ಬಂಧನದಂತಹ ಸಾಂಸ್ಕೃತಿಕ ಆಚರಣೆಗಳು ಮುಂದಿನ ಪೀಳಿಗೆಗೆ ದಾರಿದೀಪವಾಗಲಿ ಎಂದು ಅವರು ಪ್ರಶಂಸಿಸಿದರು.

ಕಾರ್ಯಕ್ರಮದಲ್ಲಿ ಕುಂದಾಪುರ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಸೌರಭಿ ಪೈ, ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ವಿದ್ಯಾ ಸಾಲಿಯಾನ್ ಹಾಗೂ ಶ್ವೇತಾ ಶ್ರೀನಿಧಿ ಉಪಾಧ್ಯಾಯ, ಮಂಡಲ ಉಪಾಧ್ಯಕ್ಷೆ ರೂಪಾ ಪೈ, ಕಾರ್ಯದರ್ಶಿ ನೇತ್ರಾವತಿ, ಜಿಲ್ಲಾ ಕಾರ್ಯದರ್ಶಿ ಅನಿತಾ ಶ್ರೀಧರ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪೃಥ್ವಿರಾಜ್ ಶೆಟ್ಟಿ, ಉಪಾಧ್ಯಕ್ಷ ಪ್ರಸಾದ್ ಬಿಲ್ಲವ, ಮಂಡಲ ಯುವ ಮೋರ್ಚಾ ಅಧ್ಯಕ್ಷ ಕಿರಣ ತೆಕ್ಕಟ್ಟೆ ಉಪಸ್ಥಿತರಿದ್ದರು.

ಇದೇ ವೇಳೆ ಕೋಟ ಪಂಚಾಯತ್ ಮಾಜಿ ಅಧ್ಯಕ್ಷ ಅಜಿತ್ ದೇವಾಡಿಗ, ಕೋಟತಟ್ಟು ಮಾಜಿ ಅಧ್ಯಕ್ಷ ಸತೀಶ್ ಕುಂದರ್ ಬಾರಿಕೆರೆ, ಕೋಟ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಸುರೇಶ್ ಕುಂದರ್, ಪ್ರಧಾನ ಕಾರ್ಯದರ್ಶಿ ಅಜಿತ್ ಶೆಟ್ಟಿ, ಎಸ್‌ಸಿ ಮೋರ್ಚಾ ಅಧ್ಯಕ್ಷ ಮಂಜುನಾಥ, ರೈತ ಮೋರ್ಚಾ ಮುಖಂಡ ಜಯಶೀಲ್ ಶೆಟ್ಟಿ, ಜಿಲ್ಲಾ ಪದಾಧಿಕಾರಿ ಶ್ರೀಲತಾ ಸುರೇಶ್ ಶೆಟ್ಟಿ, ನಿರ್ಮಲ ಶೆಟ್ಟಿ, ಸುಲತಾ ಹೆಗ್ಡೆ ಸೇರಿದಂತೆ ಪಂಚಾಯತ್ ಸದಸ್ಯರಾದ ಚಂದ್ರ ಪೂಜಾರಿ, ವಾಸು ಪೂಜಾರಿ, ಯೋಗೇಂದ್ರ, ಶೇಖರ್, ಗುಲಾಬಿ ಹಾಗೂ ಪ್ರಮುಖರಾದ ಅನಿಲ್ ಹಂದಟ್ಟು, ರಾಜು ಪಡುಕರೆ, ಪ್ರಶಾಂತ್, ರತ್ನಾಕರ ಮತ್ತು ಮಹಿಳಾ ಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *