ಮಾರ್ನಬೈಲ್: ಎಸ್.ಎಂ.ಆರ್. ಪಬ್ಲಿಕ್ ಸ್ಕೂಲ್ ನಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆ

ಬಂಟ್ವಾಳ : ಬಂಟ್ವಾಳ ತಾಲೂಕಿನ ಪಾಣೆಮಂಗಳೂರು (ಮೆಲ್ಕಾರ್) ಸಮೀಪದ ಮಾರ್ನಬೈಲು , ಎಸ್.ಎಂ.ಆರ್. ಪಬ್ಲಿಕ್ ಸ್ಕೂಲ್ ನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಶಾಲಾಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿ ರಿಫಾತ್ ಅಹ್ಮದ್ ಧ್ವಜಾರೋಹಣ ನೆರವೇರಿಸಿದರು. ಪಿ.ಟಿ.ಎ. ಅಧ್ಯಕ್ಷ ಸಂದೀಪ್ ಕುಮಾರ್, ಶಾಲಾ ಮುಖ್ಯೋಪಾಧ್ಯಾಯಿನಿ ಫಾತಿಮತುಲ್ ಝಹೀರಾ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಪೋಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಇದೇ ವೇಳೆ ವಿದ್ಯಾರ್ಥಿಗಳಿಂದ ದೇಶಪ್ರೇಮದ ಭಾವಪೂರ್ಣ ಹಾಡುಗಳು ಮತ್ತು ಭಾಷಣ ಗಳನ್ನು ಹಮ್ಮಿಕೊಳ್ಳಲಾಗಿತ್ತು.
ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಲ್ಲಿಸುವ ಸಲುವಾಗಿ, ಸ್ವಾತಂತ್ರ್ಯ ಹೋರಾಟಗಾರರ ರೂಪಕ (ಟ್ಯಾಬ್ಲೋ) ಪ್ರದರ್ಶನ ಮತ್ತು ಭಾರತದ ಸ್ವಾತಂತ್ರ್ಯ ಹೋರಾಟದ ಕೆಲವೊಂದು ನೇತಾರರ ವಿಶೇಷ ಪಾತ್ರಗಳನ್ನು ಅಭಿನಯಿಸಲಾಯಿತು.
ವಿದ್ಯಾರ್ಥಿಗಳಿಗೆ ಭಾಷಣ, ಚಿತ್ರಕಲೆ ಇತ್ಯಾದಿ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.
ಸ್ಪರ್ಧಾ ವಿಜೇತರಿಗೆ, ಬಹುಮಾನ ಹಾಗೂ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.
10 ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಫಾತಿಮಾ ತನಿಷಾ ಕಾರ್ಯಕ್ರಮ ನಿರೂಪಿಸಿದರು. 9ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ತಸ್ಮಿಯಾ ಸ್ವಾಗತಿಸಿ, ವಂದಿಸಿದರು.
