ರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಪ್ರೇರಣಾ ಮೊಗವೀರಗೆ ಪ್ರಥಮ ಸ್ಥಾನ

ರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಪ್ರೇರಣಾ ಮೊಗವೀರಗೆ ಪ್ರಥಮ ಸ್ಥಾನ

ಕೋಟ: ಉಡುಪಿಯ ಕಟಪಾಡಿಯಲ್ಲಿ ಆ.16ರಂದು ನಡೆದ KEN–MABUNI SHITO-RYU KARATE SCHOOL OF INDIA ವತಿಯಿಂದ ಆರ್.ವಿ. ಕನ್‌ಸ್ಟ್ರಕ್ಷನ್‌ ಸಹಯೋಗದಲ್ಲಿ ಆಯೋಜಿಸಲಾಗಿದ್ದ COMPETE 5.0 – 3rd Invitational National Level Karate Championshipನಲ್ಲಿ ಮಣೂರು ಪಡುಕೆರೆಯ ವಿದ್ಯಾರ್ಥಿನಿ ಪ್ರೇರಣಾ ಎನ್. ಮೊಗವೀರ ಅವರು ಕುಮಿಟೆ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.

ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಪ್ರೇರಣಾ ಅವರು ಪ್ರಥಮ ಸ್ಥಾನ ಪಡೆದು ಚಿನ್ನದ ಪದಕದೊಂದಿಗೆ ಗೌರವಿಸಲ್ಪಟ್ಟಿದ್ದಾರೆ. ವಿಜೇತ ಪ್ರೇರಣಾ ಅವರಿಗೆ ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಅವರು ಟ್ರೋಫಿ ಹಾಗೂ ಪ್ರಮಾಣಪತ್ರ ನೀಡಿ ಅಭಿನಂದಿಸಿದರು.
ಪ್ರೇರಣಾ ಅವರಿಗೆ MUKEN KAI KARATE DO FEDERATION OF INDIAಯ ಮಂಜುನಾಥ್ ಮೊಗವೀರ ಅವರು ಕರಾಟೆ ತರಬೇತಿ ನೀಡುತ್ತಿದ್ದಾರೆ. ಪ್ರಸ್ತುತ ಅವರು ಕೋಟ ವಿವೇಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

ಮಣೂರು ಪಡುಕೆರೆಯ ದಾರೊಜ್ಜಿ ಮನೆಯ ಪ್ರೇಮ–ನಾಗೇಶ್ ದಂಪತಿಯ ಪುತ್ರಿಯಾಗಿರುವ ಪ್ರೇರಣಾ ಅವರ ಈ ಸಾಧನೆಗೆ ಕುಟುಂಬಸ್ಥರು, ಶಿಕ್ಷಕರು, ತರಬೇತುದಾರರು ಹಾಗೂ ಸ್ಥಳೀಯರು ಅಭಿನಂದನೆ ಸಲ್ಲಿಸಿದ್ದಾರೆ. ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ಕರಾವಳಿಯ ಯುವ ಪ್ರತಿಭೆಯಾಗಿ ಪ್ರೇರಣಾ ಗಮನ ಸೆಳೆದಿದ್ದಾರೆ.

Leave a Reply

Your email address will not be published. Required fields are marked *