ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 20 ಮಂದಿಗೆ ಗಾಯ!

ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 20 ಮಂದಿಗೆ ಗಾಯ!

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ, 20ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡು ಘಟನೆ ಹಾವೇರಿ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.

ಮೃತ ಪ್ರಯಾಣಿಕನನ್ನು ಬಾವರಸಿಂಗ್ ರಜಪೂತ್ (18) ಎಂದು ಗುರುತಿಸಲಾಗಿದೆ.
ಗೋವಾದಿಂದ ಬೆಂಗಳೂರಿಗೆ ಬರುತ್ತಿದ್ದ ವೇಳೆ
ನಿದ್ರೆಯ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕರನ್ನು ತಕ್ಷಣ ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಹಾವೇರಿ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಪಲ್ಟಿಯಾಗಿದ್ದ ಖಾಸಗಿ ಬಸ್‌ನ್ನು ಸ್ಥಳದಿಂದ ಬೇರೆಡೆಗೆ ಸ್ಥಳಾಂತರಿಸಿದ್ದಾರೆ.
ಈ ಘಟನೆ ಹಾವೇರಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *