ಗಜಿನಿ, ಲಗಾನ್ ಚಿತ್ರದಲ್ಲಿ ನಟಿಸಿದ್ದ ಖ್ಯಾತ ಖಳನಾಯಕ ಪ್ರದೀಪ್ ರಾವತ್‌ ನಿಧನ

ಗಜಿನಿ, ಲಗಾನ್ ಚಿತ್ರದಲ್ಲಿ ನಟಿಸಿದ್ದ ಖ್ಯಾತ ಖಳನಾಯಕ ಪ್ರದೀಪ್ ರಾವತ್‌ ನಿಧನ

ಮುಂಬೈ: ಗಜಿನಿ, ಲಗಾನ್ ಅಂತಹ ಸೂಪರ್ ಹಿಟ್ ಬಾಲಿವುಡ್ ಚಲನಚಿತ್ರಗಳಲ್ಲಿ ನಟಿಸಿದ್ದ ಖ್ಯಾತ ಖಳನಾಯಕ ಪ್ರದೀಪ್ ರಾವತ್‌(74)  ನಿಧನರಾಗಿದ್ದಾರೆ.

ಹಲವು ತಿಂಗಳುಗಳಿಂದ ಕ್ಯಾನ್ಸರ್‌ ನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಈ ಮಾಹಿತಿಯನ್ನ ಸಹನಟ ಯಶ್‌ಪಾಲ್‌ ಶರ್ಮಾ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಖ್ಯಾತ ಖಳನಾಯಕ ಪ್ರದೀಪ್ ರಾವತ್ ಅವರು ಕನ್ನಡದ ʻಗಜʼ, ತಮಿಳಿನ ʻಗಜಿನಿ’ ಹಾಗೂ ಲಗಾನ್ ಸೇರಿದಂತೆ ಹಲವು ಚಿತ್ರಗಳಲ್ಲಿ ಖಳ ನಾಯಕನಾಗಿ ನಟಿಸಿದ್ದ ಪ್ರದೀಪ್ ರಾವತ್‌ ಅವರಿಗೆ 74 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ ಮತ್ತು ಮಗ ವಿಕ್ರಮಾದಿತ್ಯ ಅವರನ್ನು ಅಗಲಿದ್ದಾರೆ. ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

Leave a Reply

Your email address will not be published. Required fields are marked *