ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ – ಸ್ವಾತಂತ್ರ್ಯ ದಿನಾಚರಣೆ

ಸಾಸ್ತಾನ: ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ಇದರ ಸದಸ್ಯರು ಸಾಸ್ತಾನದ ರೋಟರಿ ಭವನದಲ್ಲಿ ಆಚರಿಸಿದ 80ನೆಯ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ನಿವೃತ್ತ ಸೈನಿಕರಾದ ಶ್ರೀ ಎಮ್ ಆನಂದ್ ನೆರವೇರಿಸಿ, ದೇಶದ ಸ್ವಾತಂತ್ರ್ಯಕ್ಕಾಗಿ ಬಲಿದಾನ ಮಾಡಿದ ಮಹಾಪುರುಷರನ್ನು ನಾವು ಎಂದಿಗೂ ಮರೆಯಬಾರದು ಹಾಗೂ ನಮ್ಮ ಮುಂದಿನ ಪೀಳಿಗೆಗೆ ಅವರು ಗಳಿಸಿ ಕೊಟ್ಟ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳಲೋಸುಗ ದೇಶದ ಗಡಿ ಭಾಗದಲ್ಲಿ ನಿರಂತರವಾಗಿ ಶ್ರಮಿಸುತ್ತಿರುವ ವೀರ ಸೈನಿಕರನ್ನು ಸದಾ ಸ್ಮರಿಸಿ ಅವರನ್ನು ಗೌರವಿಸುವಂತೆ ತಿಳಿಹೇಳಬೇಕಾಗಿದೆ ಎಂದರು.
ರೋಟರಿ ಅಧ್ಯಕ್ಷೆ ಕುಸುಮಾ ಮನೋಜ್ ಸ್ವಾಗತಿಸಿದರು. ನಿವೃತ್ತ ಪೊಲೀಸ್ ಅಧಿಕಾರಿ ಶ್ರೀ ಲಕ್ಷ್ಮೀನಾರಾಯಣ ರಾವ್ ಸಹಕರಿಸಿದರು. ಕಾರ್ಯದರ್ಶಿ ಕೆ. ರಾಜಾರಾಮ ಐತಾಳ ವಂದಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ಜ್ಯೋತಿ ಉದಯ್ ಕುಮಾರ್, ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ಸುಲತಾ ಎಸ್ ಹೆಗ್ಡೆ, ಪಾಂಡೇಶ್ವರ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಶ್ರೀಮತಿ ಲೀಲಾವತಿ ಗಂಗಾಧರ ಹಾಗೂ ಹೆಚ್ಚಿನ ರೋಟರಿ ಸದಸ್ಯರು ಉಪಸ್ಥಿತರಿದ್ದರು.
