ತೀರ್ಥಹಳ್ಳಿ: ಮಳೆಯ ಆರ್ಭಟಕ್ಕೆ ಗುಡ್ಡ ಕುಸಿದು ದಂಪತಿ-ಮಗು ಸೇರಿ ಮೂವರು ಬಲಿ

ತೀರ್ಥಹಳ್ಳಿ: ಮಳೆಯ ಆರ್ಭಟಕ್ಕೆ ಗುಡ್ಡ ಕುಸಿದು ದಂಪತಿ-ಮಗು ಸೇರಿ ಮೂವರು ಬಲಿ

ತೀರ್ಥಹಳ್ಳಿ: ಮಲೆನಾಡು ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿದ್ದ ಧಾರಾಕಾರ ಮಳೆಗೆ ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಭೀಕರ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಇಂದಿರಾ ನಗರದಲ್ಲಿ ತಡರಾತ್ರಿ ಸಂಭವಿಸಿದೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕೊಕ್ಕರೆಗಾರು ಗ್ರಾಮದ ಮಲ್ಲಿಕಾರ್ಜುನ (35), ನಾಗವೇಣಿ (28) ಹಾಗೂ ಅವರ 3 ವರ್ಷದ ಪುತ್ರ ಸಂತೋಷ್ ಮೃತಪಟ್ಟ ದುರದೃಷ್ಟಕರರು. ಇವರು ಕಟ್ಟಡ ಕಾರ್ಮಿಕರಾಗಿದ್ದ ಈ ಕುಟುಂಬವು ತೀರ್ಥಹಳ್ಳಿಯಲ್ಲಿ ಗುಡ್ಡದ ಪಕ್ಕದಲ್ಲಿ ತಾತ್ಕಾಲಿಕ ಶೆಡ್‌ ನಿರ್ಮಿಸಿಕೊಂಡು ವಾಸವಾಗಿತ್ತು.

ತಡರಾತ್ರಿ ಸುಮಾರು 2.30ರ ವೇಳೆಗೆ ಸುರಿದ ಭಾರಿ ಮಳೆಗೆ ಏಕಾಏಕಿ ಗುಡ್ಡ ಕುಸಿದು ಶೆಡ್ ಮೇಲೆ ಬಿದ್ದಿದೆ. ಪರಿಣಾಮ ಮಣ್ಣಿನ ರಾಶಿಯಡಿ ಸಿಲುಕಿದ ಮೂವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ.

ಘಟನೆಯಲ್ಲಿ ಪಕ್ಕದ ಶೆಡ್‌ನಲ್ಲಿದ್ದವರಿಗೂ ಗಂಭೀರ ಗಾಯಗಳಾಗಿದ್ದು, ಅವರನ್ನು ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *